ಬೆಂಗಳೂರು: ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ ಯಲಹಂಕ ಉಪನಗರ ಪೊಲೀಸರು, ₹11.44 ಕೋಟಿ ಮೌಲ್ಯದ 5 ಕೆಜಿ 720 ಗ್ರಾಂ MDMA ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಿಗಳಾದ ಇಮ್ರಾನ್ ಸಿದ್ದಿಕ್ ಮತ್ತು ಆಯಿಷಾ ಅವರನ್ನು ಬಂಧಿಸಿದ್ದಾರೆ. ಆರೋಪಿಗಳು ದೆಹಲಿಯಿಂದ ಕಡಿಮೆ ಬೆಲೆಗೆ MDMA ಖರೀದಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಳ್ಳಲು ಹೊಸ ಲೇಡೀಸ್ ಹ್ಯಾಂಡ್‌ಬ್ಯಾಗ್‌ಗಳ ಒಳಗೆ ಸ್ಪಾಂಜ್ ಇಟ್ಟು, ಅದರೊಳಗೆ ಡ್ರಗ್ಸ್ ಪ್ಯಾಕೆಟ್‌ಗಳನ್ನು ಅಡಗಿಸಿ ಸಾಗಾಟ ಮಾಡುತ್ತಿದ್ದರು. ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಡ್ರಗ್ಸ್ ಹಾಗೂ ಸಾಗಾಟಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
