ಬೆಂಗಳೂರು: ಶೀಟ್ ಮನೆ ಖಾಲಿ ಮಾಡುವ ವಿಚಾರವಾಗಿ ಉಂಟಾದ ಜಗಳದಲ್ಲಿ ವಕೀಲನೊಬ್ಬ ತನ್ನ ಸ್ವಂತ ತಂಗಿಯನ್ನೇ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ. ಮೀನಾಕ್ಷಿ (39) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ಅಣ್ಣ ಜಯರಾಮ್ ವಕೀಲನಾಗಿದ್ದಾನೆ. ಮೀನಾಕ್ಷಿ ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಯ ಎದುರಿನ ಶೀಟ್ ಮನೆಯಲ್ಲಿ ವಾಸವಿದ್ದರು. ಮನೆ ಖಾಲಿ ಮಾಡುವಂತೆ ಅಣ್ಣ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನ.25ರಂದು ಜಯರಾಮ್ ಪತ್ನಿ ಹಾಗೂ ಮೀನಾಕ್ಷಿ ನಡುವೆ ಗಲಾಟೆ ನಡೆದಿದ್ದು, ಇದರಿಂದ ಕೋಪಗೊಂಡ ಜಯರಾಮ್ ತಂಗಿಯ ತಲೆಗೆ ಬ್ಯಾಟ್‌ನಿಂದ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮೀನಾಕ್ಷಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ತಾಯಿಯನ್ನು ಕಳೆದುಕೊಂಡಿದ್ದಾರೆ. ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಜಯರಾಮ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
