ಹುಬ್ಬಳ್ಳಿ: 2024ರ ಮೇ ತಿಂಗಳಲ್ಲಿ ನಡೆದಿದ್ದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನಾಥ್‌ಗೆ ಹುಬ್ಬಳ್ಳಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿದೆ. ನವೆಂಬರ್ 21ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿದ್ದ ನ್ಯಾಯಾಲಯ, ನವೆಂಬರ್ 25ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಭಾರತೀಯ ದಂಡ ಸಂಹಿತೆಯ 451, 302 ಮತ್ತು 201ನೇ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. 2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯ ಮನೆಯಲ್ಲಿ 20 ವರ್ಷದ ಅಂಜಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಪ್ರೀತಿಯನ್ನು ನಿರಾಕರಿಸಿ ಸಂಪರ್ಕ ಕಡಿತಗೊಳಿಸಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ 494 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news
