Breaking News

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಆಟೋ ಚಾಲಕನ ಬಂಧನ

ಮಡಿಕೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ ಬಂಧಿತ ಆರೋಪಿ. ಮನೆಗೆ ಡ್ರಾಪ್ ನೀಡುವ ನೆಪದಲ್ಲಿ ಪರಿಚಯವಿದ್ದ ಬಾಲಕಿಯನ್ನು ಆಟೋದ ಮುಂದಿನ ಸೀಟಿನಲ್ಲಿ ಕೂರಿಸಿಕೊಂಡು ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮನೆಗೆ ಬಂದ ಬಾಲಕಿ ನೋವಿನಿಂದ ನರಳಾಡುತ್ತಿದ್ದುದನ್ನು ಗಮನಿಸಿದ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ದೌರ್ಜನ್ಯದ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹11.44 ಕೋಟಿ ಮೌಲ್ಯದ MDMA ಜಪ್ತಿ, ಪ್ರೇಮಿಗಳ ಬಂಧನ

ಬೆಂಗಳೂರು: ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ ಯಲಹಂಕ ಉಪನಗರ ಪೊಲೀಸರು, ₹11.44 ಕೋಟಿ ಮೌಲ್ಯದ 5 ಕೆಜಿ …

Leave a Reply

Your email address will not be published. Required fields are marked *