ಬೆಂಗಳೂರು: ನಗರದ ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕ ಲೇಔಟ್‌ನಲ್ಲಿ ಗಜಲಿಂಗ (35) ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೂಲತಃ ರಾಯಚೂರು ಜಿಲ್ಲೆಯವರಾದ ಗಜಲಿಂಗ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಜೊತೆಯಲ್ಲಿ ವಾಸವಿದ್ದ ವ್ಯಕ್ತಿಗಳೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
