ಬೆಂಗಳೂರು: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಈ ಹಿಂದೆ ಕಗ್ಗಲಿಪುರ ಠಾಣೆಗೆ ದೂರು ನೀಡಿದ್ದರು. ಇದರ ಬಳಿಕ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುನಿರತ್ನ ಅವರು ಸಂತ್ರಸ್ತೆಯ ಗುರುತು ಹಾಗೂ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ, ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಬಿಎನ್‌ಎಸ್ ಸೆಕ್ಷನ್ 72 ಮತ್ತು 351(2) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
