ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಬಿಸಿಯೂಟದ ಕ್ಯಾಶ್ ಬುಕ್ ಸರಿಪಡಿಸಲು ₹15 ಸಾವಿರ ಲಂಚ ಪಡೆಯುತ್ತಿದ್ದ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಹಿಂದಿನ ಅವಧಿಯ ಬಿಸಿಯೂಟ ಕ್ಯಾಶ್ ಬುಕ್ ಸರಿಪಡಿಸುವ ಕೆಲಸಕ್ಕಾಗಿ ದೈಹಿಕ ಶಿಕ್ಷಣ ಶಿಕ್ಷಕ ಪಿ.ಎಂ. ಹೆಜ್ಜೆ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹುಕ್ಕೇರಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ವೆಂಕಟೇಶ್ ಯಡಹಳ್ಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
