Breaking News

ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಂದು ತುಂಡು ತುಂಡಾಗಿ ಮೃತದೇಹ ಕತ್ತರಿಸಿ ಎಸೆದ ದುರುಳರು!

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯಲ್ಲಿ ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಹನುಮಂತಪ್ಪ (38) ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಒಂದು ಲಕ್ಷ ರೂಪಾಯಿ ಬಡ್ಡಿ ವ್ಯವಹಾರದ ವಿಚಾರಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಸುಟ್ಟು, ತುಂಡುಗಳಾಗಿ ಕತ್ತರಿಸಿ ಕೆರೆ ಹಾಗೂ ಕಾಲುವೆಗೆ ಎಸೆದಿದ್ದಾರೆ. ಪತಿ ಕಾಣೆಯಾಗಿರುವ ಬಗ್ಗೆ ಪತ್ನಿ ನೀಡಿದ ದೂರಿನ ತನಿಖೆ ವೇಳೆ ಕೊಲೆ ರಹಸ್ಯ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ, ಶಶಿಕುಮಾರ್, ಮಲ್ಲಿಕಾರ್ಜುನ ಹಾಗೂ ಗಂಗಾಧರ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹದ ತುಂಡುಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Share News

About BigTv News

Check Also

7 ಮಂದಿ ಕೊ*ಲೆ ಪ್ರಕರಣ, ಹಂತಕನ ಮಗಳ ಭಯಾನಕ ಕೃತ್ಯ ಬಯಲು!

ಬೆಂಗಳೂರು: ಒಂದೇ ಕುಟುಂಬದ 7 ಜನರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹಂತಕನ ಅಪ್ರಾಪ್ತ ಪುತ್ರಿಯ ಪಾತ್ರದ ಬಗ್ಗೆ ಆಘಾತಕಾರಿ ಮಾಹಿತಿ …

Leave a Reply

Your email address will not be published. Required fields are marked *