ಶಿವಮೊಗ್ಗ: ಹೆಚ್ಚಿನ ವರದಕ್ಷಿಣೆ ತರುವಂತೆ ಪತ್ನಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗದ 2ನೇ ಜೆಎಂಎಫ್‌ಸಿ ನ್ಯಾಯಾಲಯವು ಮಹಮ್ಮದ್ ಇರ್ಷಾದ್‌ಗೆ 3 ವರ್ಷ ಜೈಲು ಶಿಕ್ಷೆ ಹಾಗೂ ₹14,000 ದಂಡ ವಿಧಿಸಿದೆ. ಪತ್ನಿ ಅಸ್ಮಾ ಫರ್ಹಿನ್ ನೀಡಿದ ದೂರಿನ ಮೇರೆಗೆ 2023ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಭರತ್ ಕುಮಾರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನವೆಂಬರ್ 24ರಂದು ನ್ಯಾಯಾಧೀಶ ಸಿದ್ಧರಾಜು ಎನ್.ಕೆ. ಅವರು ತೀರ್ಪು ಪ್ರಕಟಿಸಿದ್ದು, ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಸರ್ಕಾರದ ಪರವಾಗಿ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news
