Breaking News

ಪತ್ನಿಯನ್ನು ಕೊಂದು ಹೃದಯಾಘಾತವೆಂದು ನಾಟಕವಾಡಿದ್ದ ಪತಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಮಂಗಳೂರು: ಪತ್ನಿಯನ್ನು ಹತ್ಯೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ್ದ ಸಂಜೀವ ನಾಯ್ಕ ಎಂಬಾತನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. 2024ರ ಡಿಸೆಂಬರ್ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದಲ್ಲಿ ಘಟನೆ ನಡೆದಿತ್ತು. ಪತ್ನಿಗೆ ಹೃದಯಾಘಾತವಾಗಿದೆ ಎಂದು ನಂಬಿಸಿ ಆಸ್ಪತ್ರೆಗೆ ಕರೆದೊಯ್ದಿದ್ದ ಪತಿಯ ಕೃತ್ಯ ವೈದ್ಯರಿಗೆ ಅನುಮಾನ ಮೂಡಿಸಿತ್ತು. ಪೊಲೀಸರ ವಿಚಾರಣೆ ವೇಳೆ ಆರೋಪಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದನು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ದರೆ ಹೆಚ್ಚುವರಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Share News

About BigTv News

Check Also

ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಂದು ತುಂಡು ತುಂಡಾಗಿ ಮೃತದೇಹ ಕತ್ತರಿಸಿ ಎಸೆದ ದುರುಳರು!

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯಲ್ಲಿ ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಹನುಮಂತಪ್ಪ (38) ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಒಂದು ಲಕ್ಷ ರೂಪಾಯಿ …

Leave a Reply

Your email address will not be published. Required fields are marked *