ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು ರಮೇಶ್ ನಾಯ್ಕರ (29) ಹಾಗೂ ಬಸವ್ವ ನಾಯ್ಕರ (60) ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರವಾಗಿ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಜೋಡಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮಡಿವಾಳರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಯರಗಟ್ಟಿ ಪೊಲೀಸರು, ಹತ್ಯೆಗೆ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
