ಕಾರಟಗಿ ತಾಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಹುಣ್ಣಿಮೆ ನಿಮಿತ್ತ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಬುಧವಾರ ರಾತ್ರಿ ಆರಂಭವಾದ ವಾಗ್ವಾದ ಗುರುವಾರವೂ ಮುಂದುವರಿದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘರ್ಷಣೆಯಲ್ಲಿ ಹಲ್ಲೆ ನಡೆದಿದ್ದು, ಹನುಮಂತಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಎರಡೂ ಕೋಮಿನ ತಲಾ 60 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಿತ್ತೂರು ಚನ್ನಮ್ಮ ಮೂರ್ತಿ ಹೆಸರಿನಲ್ಲಿ ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಲ್ಮೀಕಿ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
