ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಜನರಿಗೆ ಬೆದರಿಕೆ ಹಾಕುತ್ತಿದ್ದ ಶಿವಪ್ರಸಾದ್ ಅಲಿಯಾಸ್ ಶಿವು ಅಲಿಯಾಸ್ ಟಿಂಕು ಎಂಬ ರೌಡಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿ.ಚನ್ನಸಂದ್ರದ ಬಚ್ಚಣ್ಣ ಲೇಔಟ್ ನಿವಾಸಿಯಾದ ಈತನ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ರೌಡಿ ಚಟುವಟಿಕೆಗಳ ಜೊತೆಗೆ ಕೋಳಿ ಮೊಟ್ಟೆ ವ್ಯಾಪಾರವನ್ನೂ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ನಿಗಾ ವಹಿಸಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
