ಬೆಳಗಾವಿ: ಆಸ್ತಿ ವಿವಾದ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಂಬಂಧಿಕರ ನಡುವೆ ನಡೆದ ಗಲಾಟೆಯಲ್ಲಿ ಅತ್ತೆ ಬಸವ್ವ (60) ಮತ್ತು ಅಳಿಯ ರಮೇಶ (29) ಎಂಬುವವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜೀವಾಪುರ ಗ್ರಾಮದಲ್ಲಿ ನಡೆದಿದೆ. 10 ಎಕರೆ ಜಮೀನು ಹಂಚಿಕೆ ವಿಚಾರವಾಗಿ ಹಲವು ವರ್ಷಗಳಿಂದ ಕುಟುಂಬದವರ ನಡುವೆ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ರಾತ್ರಿ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಆರೋಪಿಗಳು ಬಸವ್ವ ಅವರ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಬಂದ ರಮೇಶನನ್ನೂ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬಸವ್ವ ಅವರ ಸಂಬಂಧಿಕರಾದ ರವಿ ಮತ್ತು ಪುಂಡಲೀಕ ಕೊಲೆ ಆರೋಪಿಗಳಾಗಿದ್ದು, ಮುರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
