Breaking News

ಚಿಂಚೋಳಿಯಲ್ಲಿ ಬಿಜೆಪಿಗೆ ಗೆಲುವು ಖಚಿತ: ಬಿಎಸ್‌ವೈ..

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಚುನಾವಣೆಗಾಗಿ ಹಣದ ಹೊಳೆಯನ್ನೇ ಹರಿಸಲಾಗುತ್ತಿದೆ ಎಂದು ಆರೋಪಿಸಿದ ಯಡಿಯೂರಪ್ಪ, ತಾವು ಜನರ ವಿಶ್ವಾಸ ಮತ್ತು ಪ್ರೀತಿ ಗಳಿಸಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದಿದ್ದಾರೆ.ಸಮ್ಮಿಶ್ರ ಸರ್ಕಾರದಲ್ಲಿ ಸಚಿವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗೃಹ ಸಚಿವರ ಒತ್ತಡದಿಂದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಹಿಂಸೆ ನೀಡಲಾಗುತ್ತಿದೆ. ಇದನ್ನು ವಿರೋಧಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ಕಾರ್ಯಕರ್ತರೆಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಕರೆ ನೀಡಿದರು.ಇದೇ ಸಂದರ್ಭದಲ್ಲಿ ರೈತರ ಸಲ ಮನ್ನಾ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದರು. ಆದರೆ, ಹತ್ತು ತಿಂಗಳಾದರೂ ರೈತರ ಸಾಲಮನ್ನಾ ಆಗಿಲ್ಲ. ಈಗ ರೈತರಿಗೆ ಸಾಂತ್ವನ ಪತ್ರ ಬರೆಯುವುದಾಗಿ ಹೇಳುತ್ತಿದ್ದಾರೆ. ಇದು ನಿಜಕ್ಕೂ ಹಾಸ್ಯಾಸ್ಪದ ಎಂದ ಯಡಿಯೂರಪ್ಪ ಹೇಳಿದರು

Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ: ಬ್ಲ್ಯಾಕ್‌ಮೇಲ್ ಮಾಡಿ ಯುವತಿಗೆ ಅತ್ಯಾಚಾರ ಎಂಬ ಗಂಭೀರ ಆರೋಪ..

ಹುಬ್ಬಳ್ಳಿ: ನಗರದಲ್ಲಿ ಈಗಾಗಲೇ ಜಿಮ್ ಟ್ರೇನರ್ ಸಂಬಂಧಿತ ಪ್ರಕರಣ ಚರ್ಚೆಯಲ್ಲಿರುವ ನಡುವೆಯೇ, ಮತ್ತೊಂದು ಗಂಭೀರ ‘ಲವ್ ಜಿಹಾದ್’ ಆರೋಪದ ಪ್ರಕರಣ …

Leave a Reply

Your email address will not be published. Required fields are marked *