ಹುಬ್ಬಳ್ಳಿ: ರಾಜ್ಯದ ಪ್ರಸ್ತುತ ಮೈತ್ರಿ ಸರ್ಕಾರ ಮುಳಗುವ ದೋಣಿಯಾಗಿದ್ದು, 23ರ ನಂತರದಲ್ಲಿ ಪತನವಾಗುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ರಾಜ್ಯ ಮೋರ್ಚಾ ಅಧ್ಯಕ್ಷರಾದ ಬಿ.ಜೆ.ಪುಟ್ಟಸ್ವಾಮಿ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮೈತ್ರಿ ಪಕ್ಷದ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ನಿಂಧನೆ ಮೂಲಕ ಮೈತ್ರಿ ಸರ್ಕಾರದ ಪತನದ ರೂವಾರಿಗಳಾಗಿದ್ದಾರೆ ಎಂದರು. ಮಾಜಿ ಸಿಎಂ ಸಿದ್ಧರಾಮಯ್ಯನವರು ಹಾಗೂ ಎಚ್.ವಿಶ್ವನಾಥ ಅವರ ಹೇಳಿಕೆಗಳು ತಾರಕಕ್ಕೇ ಏರುತ್ತಿವೆ ಈ ಹಿನ್ನೆಲೆಯಲ್ಲಿ ಮೇ 23 ರ ಒಳಗಾಗಿ ಅಥವಾ 23ರ ನಂತರದಲ್ಲಿ ಮೈತ್ರಿ ಸರ್ಕಾರ ಪತನವಾಗುವುದು ನಿಶ್ಚಿತವಾಗಿದೆ ಎಂದು ಅವರು ಹೇಳಿದರು. 2013ರಲ್ಲಿ ಸಿದ್ಧರಾಮಯ್ಯನವರು ಸಿಎಂ ಆಗಿದ್ದಾಗ ಕುಂದಗೋಳ ಕ್ಷೇತ್ರದಲ್ಲಿ ದಿ.ಸಿ.ಎಸ್.ಶಿವಳ್ಳಿಯವರು ಶಾಸಕರಾಗಿದ್ದರೂ ಆದರೇ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಸಿದ್ಧರಾಮಯ್ಯನವರ ಮಾಡಿಲ್ಲ ಎಂದು ಸಿದ್ಧರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ರೆಸಾರ್ಟ್ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಲ್ಬಣಗೊಂಡಿದ್ದರು ಕೂಡ ಸಿಎಂ ಕುಮಾರಸ್ವಾಮಿ ಅವರು ರೆಸಾರ್ಟನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ದೇವಸ್ಥಾನ ಹಾಗೂ ರೆಸಾರ್ಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪ ಮಾಡಿದರು.ಕುಂದಗೋಳ ವಿಧಾನಸಭಾ ಉಪಚುನಾವಣೆ ಕುರಿತು ಮಾತನಾಡಿದ ಅವರು, ಜನರು ಸ್ವಯಂ ಪ್ರೇರಣೆಯಿಂದ ಎಲ್ಲ ವರ್ಗದ ಜನರು ಭಾರತೀಯ ಜನತಾ ಪಾರ್ಟಿಯ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಈ ಬಾರಿ ಚುನಾವಣೆ ಫಲಿತಾಂಶದ ನಂತರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದ್ದು, ಯಡಿಯೂರಪ್ಪ ಸಿಎಂ ಆಗುವುದು ಶತಸಿದ್ಧ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಚಿಕ್ಕನಗೌಡರ ನೇತೃತ್ವದಲ್ಲಿ ಏಂಟನೂರು ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಮಾಡಿದೆ. ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆ ನಿರ್ಮಾಣ, ಕುಂದಗೋಳದ ಸವಾಯಿ ಗಂಧರ್ವ ಹಾಲ ನಿರ್ಮಾಣ ಹೀಗೆ ಹತ್ತು ಹಲವಾರು ಜನಪರ ಕಾರ್ಯಗಳನ್ನು ಬಿಜೆಪಿ ಮಾಡಿದೆ ಅದೇ ರೀತಿಯಾಗಿ ಜನರು ಈ ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಪಣತೊಟ್ಟಿದ್ದಾರೆ ಎಂದು ಅವರು ತಿಳಿಸಿದರು.ಜಮೀರ್ ಅಹ್ಮದ ಖಾನ ಅವರ ಹೇಳಿಕೆಯ ವಿಚಾರವಾಗಿ ಮಾತನಾಡಿದ ಅವರು, ಜಮೀರ್ ಅಹ್ಮದ ಖಾನ್ ಅವರು ಜೋಕರ್ ತರ ಹೇಳಿಕೆ ಕೊಡುತ್ತಿದ್ದಾರೆ.ಅವರು ಯಾವ ಆಧಾರದ ಮೇಲೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿ.ಎಸ್.ಸೋಮಶೇಖರ, ಚಂದ್ರು ಮುಶಪ್ಪನವರ, ಕೆ.ಸಿ.ಕುರಲಗೇರಿ, ಗಂಗಾಧರ ಧರಣ್ಣೇವರ, ಸುಭಾಸ ಗೌಡಪ್ಪನವರ ಸೇರಿದಂತೆ ಇತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





