ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಿಗೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಮೇ 15ರ ಬುಧವಾರ ಡಿ.ಕೆ ಶಿವಕುಮಾರ್ ಅವರ 58 ನೇ ಜನ್ಮದಿನ. ಈ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಮುಂದಾಗಿದ್ರು. ಆದ್ರೆ, ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಯಾರೂ ಕೂಡಾ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಬಾರದು ಅಂತಾ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಅಲ್ಲದೇ ಶಿವಕುಮಾರ್ ಸದ್ಯ, ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಮಗ್ನರಾಗಿದ್ದಾರೆ. ಈ ಹಿನ್ನೆಲೆ, ಹುಟ್ಟುಹಬ್ಬ ಆಚರಣೆ ನಿಮಿತ್ತ ಯಾರೂ ಹುಬ್ಬಳ್ಳಿಗೆ ಬರುವುದು ಬೇಡ. ಕಟೌಟ್ ಹಾಕುವುದಾಗಲಿ, ಕೇಕ್ ಕತ್ತರಿಸುವುದಾಗಲಿ ಮಾಡೋದು ಬೇಡ ಎಂದು ಶಿವಕುಮಾರ್ ಮನವಿ ಮಾಡಿದ್ದಾರೆ. ನಾಳೆ ಬೆಳಗ್ಗೆ ಲಕ್ಷ್ಮೇಶ್ವರ ಸಮೀಪದ ಮುಕ್ತಿ ಮಂದಿರಕ್ಕೆ ಭೇಟಿ ನೀಡಲಿದ್ದು, ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳಲಿದ್ದಾರೆ. ನಂತರ ಚುನಾವಣೆ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಡಿ. ಕೆ. ಶಿವಜುಮಾರ್ ಸಾಂತ್ವನ..ಕುಂದಗೋಳದ ಯರಗುಪ್ಪಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದರು. ಯಲ್ಲವ್ವ (56) ಶ್ರಾವಣಿ (6), ಜ್ಯೋತಿ (4) ಮೃತರು. ಈ ಹಿನ್ನೆಲೆ ಅಲ್ಲಿಗೂ ಭೇಟಿ ನೀಡಿದ ಶಿವಕುಮಾರ್ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾತನಾಡಿದ ಅವರು,ಈ ಭಾಗದಲ್ಲಿ ಅನೇಕ ಮನೆಗಳು ಶಿಥಿಲಾವಸ್ಥೆಯಲ್ಲಿದ್ದು, ಈಗ ಛಾಲ್ತಿಯಲ್ಲಿರುವ ಸರಕಾರಿ ವಸತಿ ಯೋಜನೆಗಳ ಅಡಿ ಪುನರ್ವಸತಿ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏನನ್ನೂ ಪ್ರಕಟಿಸಲು ಹೋಗುವುದಿಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





