ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ ಓರ್ವ ಮೂರ್ಖತನದ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾರೆ ಎಂದು ಬಿಜಿ ಪುಟ್ಟಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಹಿತಕ್ಕಿಂತ ಸಿಎಂಗೆ ಮಗನ ಗೆಲುವು ಮುಖ್ಯವಾಗಿದೆ. ಕುಮಾರಸ್ವಾಮಿ ಸ್ವಾರ್ಥ ಮುಖ್ಯಮಂತ್ರಿ. ಕಾಂಗ್ರೆಸ್-ಜೆಡಿಎಸ್ ನಾಯಕರ ಕಚ್ಚಾಟ ತಾರಕಕ್ಕೇರಿದೆ. ಮೈತ್ರಿ ಸರ್ಕಾರದ ಆಡಳಿತದಿಂದ ಅಲ್ಲಿನ ಶಾಸಕರು ಬೇಸತ್ತಿದ್ದಾರೆ ಎಂದು ಪುಟ್ಟಸ್ವಾಮಿ ಆರೋಪಿಸಿದರು. ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿಗೆ ಬರಲು ಕ್ಯೂ ನಿಂತಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ 6 ಜನ ಶಾಸಕರಿದ್ದಾರೆ. 23ರ ನಂತರ ಫಲಿತಾಂಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಸಂಪತ್ತು ಸಂಪಾದನೆ ಬಗ್ಗೆ ರಾಜ್ಯದ ಜನತೆ ಗೊತ್ತಿದೆ. ಹೋದಲೆಲ್ಲ ನಾನೆ ಗೆಲ್ಲಿಸುತ್ತೇನೆ ಎಂಬ ಭ್ರಮೆಯಲ್ಲಿ ಡಿಕೆ ಶಿವಕುಮಾರ್ ಇದ್ದಾರೆ ಎಂದು ಬಿಜಿ ಪುಟ್ಟಸ್ವಾಮಿ ವಾಗ್ದಾಳಿ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




