ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ತಮ್ಮ ವರ್ಚಸ್ಸು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಹೊಸ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಇಡೀ ದೇಶವನ್ನೇ ತಮ್ಮತ್ತ ನೋಡುವಂತೆ ಮಾಡಿದ ಮಂಡ್ಯ ಕ್ಷೇತ್ರದ ಸಂಸದೆ ಸುಮಾಲತರವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಸುಮಾಲತಾ ರವರಿಗೆ ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದೆ. ಆದ್ರೇ ಚುನಾವಣೆ ಮುಂಚೆ ಟಿಕೇಟ್ ನೀಡುವ ವಿಚಾರದಲ್ಲಿ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ ಸಂಸದೆ. ಆದ್ರೇ ಸಿದ್ದು ಪ್ರಕಾರ ಅಂಬರೀಶ್ ಕಾಂಗ್ರೆಸ್ ಪಕ್ಷದಲ್ಲೇ ಇದ್ದವರು , ಆದ ಕಾರಣ ನೀವು ಕಾಂಗ್ರೆಸ್ ಪಕ್ಷದಲ್ಲಿ ಇರಬೇಕೇಂಬ ವಿಚಾರವನ್ನು ಸುಮಾಲತಾ ಮುಂದೆ ಸಿದ್ದು ಪ್ರಸ್ಥಾಪ ಮಾಡಿದ್ದಾರಾಂತೆ, ಆದ್ರೆ ಸೈಲೆಂಟ್ ಆಗಿಯೇ ಎಲ್ಲವನ್ನು ಯೋಚಿಸುವ ಮಾಸ್ಟರ್ ಮೈಂಡ್ ಸುಮಾಲತಾ ರವರಿಗೆ ತಮ್ಮ ಕ್ಷೇ ಅಭಿವೃದ್ಧಿಗೆ ಬಿಜೆಪಿ ಬೆಂಬಲ ಬೇಕಿದೆ . ಹಾಗೂ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅತ್ಯಂತ ದೊಡ್ಡಮಟ್ಟದಲ್ಲಿ ಬೆಂಬಲ ನೀಡಿದ್ದರು. ಇದೆನೆಲ್ಲ ಅರಿತ ಸುಮಲತಾ ತಟಸ್ಥವಾಗಿಯೇ ಉಳಿತರಾ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತರಾ ಎಂಬುದು ಮುಂದಿನ ದಿನಗಳಲ್ಲಿ ಕಾದು ನೋಡ ಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





