Breaking News

ಆಹಾರ ಪದಾರ್ಥಗಳನ್ನು ಕದ್ದೋತ್ತಿದ್ದಾಗ ಸಿಕ್ಕಿಬಿದ್ದ ಅಂಗನವಾಡಿ ಕಾರ್ಯಕರ್ತೆ

ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡಬೆಕಿದ್ದ ಆಹಾರ ಪದಾರ್ಥಗಳನ್ನು ಕದ್ದು ಒಯ್ಯುತ್ತಿದ್ದ ಕಾರ್ಯಕರ್ತೆಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ. ಅಂಗನವಾಡಿ ಆಹಾರ ಕದ್ದು ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಕಾಗವಾಡದ ಅಂಗನವಾಡಿ ಸಂಖ್ಯೆ ಏಳರಲ್ಲಿ ಘಟನೆ ಸಂಭವಿಸಿದ್ದು, ಲೂನಾ ಎಕ್ಸ ಎಲ್ ಬೈಕ್ ನಲ್ಲಿ ಆಹಾರ ಸಾಗಿಸುವಾಗ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದು ಅಂಗನವಾಡಿ ಕಾರ್ಯಕರ್ತೆಯ ಬ್ಯಾಗ್ ಪರಿಶೀಲನೆ ಮಾಡಿದಾಗ ಆಹಾರ ಕದ್ದೋಯ್ಯುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಾಹಿತಿ ಪಡೆದ ಕಾಗವಾಡ ಸಿಡಿಪಿಓ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಅಂಗನವಾಡಿ ಕಾರ್ಯಕರ್ತೆ ವಿರುದ್ದ ಗ್ರಾಮಸ್ಥರು ಆಕ್ರೊಶ ವ್ಯಕ್ತ ಪಡೆಸಿದ್ದು, ಆಕೆಯನ್ನು ಪೋಲಿಸರ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *