Breaking News

ಗಾಂಜಾ ಮಾರಾಟ ವಿದೇಶಿ ವ್ಯಕ್ತಿ ಬಂಧನ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸೂಡಾನ್ ದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ಆತನಿಂದ 1280ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ.ಹಗ್ಗೆರೆ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಹಮದ್ ಮಹಮದ್ ಮೂಸ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ. ಆತನ ಬಳಿ ಇದ್ದ ಬ್ಯಾಗ್ ನಲ್ಲಿ ಗಾಂಜಾ ಇದ್ದದ್ದು ಪತ್ತೆಯಾಗಿದೆ. ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈ ವ್ಯಕ್ತಿಯು ಮೆಡಿಕಲ್ ಕಾಲೇಜು ಫ್ರೆಂಡ್ಸ್ ಗಳಿಗೆ ಮಾರಾಟ ಮಾಡಲು ತಂದಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ. ಈ ಕುರಿತುತುಮಕೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *