ಉತ್ತರ ಕರ್ನಾಟಕದಲ್ಲಿ ಪ್ರತಿ ಬಾರಿಯಂತೆ ಈ ಭಾರಿಯೂ ನೀರಿನ ಸಮಸ್ಯೆ ಎದುರಾಗಿದೆ. ಇತ್ತ ಮಳೆಗಾಲ ಆರಂಭವಾದ್ರೂ ಜನರಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಇದರಿಂದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಪುರಸಭೆಯು ಸಾರ್ವಜನಿಕರಿಗೆ ಪೂರೈಕೆ ಮಾಡುತ್ತಿದೆ. ಮೂರು ದಿನಕ್ಕೊಮ್ಮೆ ಬರುವ ಟ್ಯಾಂಕರ್ ನೀರಿಗಾಗಿ ಮಹಿಳೆಯರು, ಮಕ್ಕಳು ಕಾಯುವಂತಾಗಿದೆ. ಹಾಗೂ ಈ ರೀತಿಯಲ್ಲಿ ಪುರಸಭೆಯಿಂದ ವಿವಿಧ ವಾರ್ಡಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಕಳೆದ ಹದಿನೈದು ದಿನಗಳಿಂದ ನೀರಿಗಾಗಿ ಬೇಡಿಕೆ ಹೆಚ್ಚಾಗಿದೆ. ಇದರಿಂದ ನೊಂದ ಜನತೆ ಅಧಿಕಾರ ವಿರುದ್ದ ಹಿಡಿ ಶಾಪ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





