ತಟಮೆ ಏಟಿಗೆ ಯಾರು ತಾನೇ ಸುಮ್ಮನೆ ಇರುತ್ತಾರೆ ಹೇಳಿ. ಯಾರೇಯಾದ್ರೂ ಸಹ ಒಂದು ಸ್ಟೆಪ್ ಹೆಜ್ಜೆ ಹಾಕೇ ಬಿಡುತ್ತಾರೆ. ಅಂತಹದ್ರಲ್ಲಿ ನಮ್ಮ ಸ್ಪೀಕರ್ ರಮೇಶ್ ಕುಮಾರ್ ಸುಮ್ಮನೆ ಇರುತ್ತಾರಾ? . ನಗು ಮುಖದಲ್ಲಿ ತಮಟೆ ವಾದ್ಯಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ನೃತ್ಯ ಮಾಡಿದ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಪಟ್ಟಣದಲ್ಲಿ ದೇವರ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡಿದ್ದಾರೆ. ಶ್ರೀನಿವಾಸಪುರ ಪಟ್ಟಣದಲ್ಲಿ ಸಿಂಹಾಚಾಲಂನ ಅಪ್ಪಣ್ಣ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದೆ. ಅಪ್ಪಣ್ಣ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಉತ್ಸವ ಮೂರ್ತಿಗಳು ಶನಿವಾರ ಪಟ್ಟಣಕ್ಕೆ ಆಗಮಿಸಿತ್ತು. ಉತ್ಸವ ಮೂರ್ತಿಗಳನ್ನ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಭಾಗವಹಿಸಿದ್ದರು. ಬೆಂಬಲಿಗರ ಒತ್ತಾಯದ ಮೇರೆಗೆ ಡ್ಯಾನ್ಸ್ ರಮೇಶ್ ಕುಮಾರ್ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





