ಚಿರತೆ ದಾಳಿಗೆ ಮೂರು ಮೇಕೆ ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿದೆ. ಕಳೆದ ರಾತ್ರಿ ಚಿಕ್ಕಣ್ಣ ಎಂಬ ರೈತನ ಕೊಟ್ಟಿಗೆ ನುಗ್ಗಿದ ಚಿರತೆ ಮೂರು ಮೇಕೆಗಳನ್ನ ಕೊಂದು ಹಾಕಿದ. ಹೊಲ ಗದ್ದೆ ತೋಟಗಳಲ್ಲಿ ದಾಳಿ ಮಾಡುತ್ತಿದ್ದ ಚಿರತೆಗಳು ಇದೀಗ ಗ್ರಾಮಕ್ಕೆ ಲಗ್ಗೆ ಇಡುತ್ತಿವೆ. ಇದರಿಂದ ಗ್ರಾಮಸ್ಥರು ಭಯಬೀತರಾಗಿದ್ದಾರೆ..ಅರಣ್ಯದಲ್ಲಿ ಆಹಾರ ಸಿಗದೆ ಪ್ರಾಣಿಗಳು ಹಳ್ಳಿ,ಪಟ್ಟಣಗಳತ್ತ ಲಗ್ಗೆ ಇಡುತ್ತಿವೆ. ಅರಣ್ಯಾಧಿಕಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





