ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್. ಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ 32ನಿರ್ದೇಶಕರ ನೂತನ ಕಾರ್ಯಕಾರಿ ಮಂಡಳಿಗೆ ಪಶುಸಂಗೋಪನೆ ಮತ್ತು ಶಿಕ್ಷಣ ಇಲಾಖೆಯನ್ನು ಹೊರತುಪಡಿಸಿ 25 ಸದಸ್ಯರು ವಿವಿಧ ಇಲಾಖೆಗಳಿಂದ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಡಾ.ನಾರಾಯಣಗೌಡ ಅವರು ನೂತನ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಿದರು. ಜೂನ್ 13ರಂದು ನಡೆಯುವ ಚುನಾವಣೆಯಲ್ಲಿ ಉಳಿದ ಏಳು ಸ್ಥಾನಗಳಿಗೆ ಆಯ್ಕೆಯು ನಡೆಯಲಿದೆ.ಕೃಷ್ಣರಾಜಪೇಟೆ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘವು ಸಂಘದ ಅಧ್ಯಕ್ಷ ಎನ್.ಜಯರಾಮು ಅವರ ನೇತೃತ್ವದಲ್ಲಿ ಕ್ರಿಯಾಶೀಲವಾಗಿ ಜಿಲ್ಲೆಯಲ್ಲಿಯೇ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಸಂಘವು ನೂತನ ಸಭಾ ಭವನವನ್ನು ನಿರ್ಮಿಸಲು ಅಗತ್ಯವಾಗಿ ಬೇಕಾದ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಶಾಸಕರ ಧರ್ಮಪತ್ನಿ ಶ್ರೀಮತಿ ದೇವಕಿ ನಾರಾಯಣಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





