ರಾಜ್ಯದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಆಗುತ್ತಿದೆ . ಉಳ್ಳಾಲ ಹಾಗೂ ಉಚ್ಚಿಲ ದಲ್ಲಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಆಗಿದೆ .40 ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. 50 ಕ್ಕೂ ಹೆಚ್ಚು ಮರಗಳು ಸಮುದ್ರ ಪಾಲಾಗಿವೆ. ಉಳ್ಳಾಲದ ಹಲವು ಕಡೆಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಕಡಲ ತೀರದ ನಿವಾಸಿಗಳು ಎಚ್ಚರಿಕೆ ಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ .ಅಗತ್ಯ ಬಿದ್ದರೆ ಅಪಾಯದಲ್ಲಿ ಸಿಲುಕಿರುವ ಜನರಿಗೆ ನಿರ್ವಹಸಿತರ ಕೇಂದ್ರ ತೆರೆಯಲು ಸರಕಾರ ಸೂಚನೆ ನೀಡಿದೆ. ಮುಂಗಾರು ರಾಜ್ಯದ ಕರಾವಳಿಗೆ ಅಪ್ಪಳಿಸಿದರೂ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ಬಲವಾದ ಬಿರುಗಾಳಿ ಬಿಸುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಜಾಸ್ತಿ ಆಗಿದೆ .ಈ ಬಾರಿ ಮಳೆಗಾಲದ ಆರಂಭದ ದಿನಗಳಲ್ಲಿ ಕಡಲ್ ಕೊರೆತ ತೀವ್ರ ಗೊಂಡಿರುವುದು ಕಡಲ ತೀರದ ನಿವಾಸಿಗಳನ್ನು ಆತಂಕಕ್ಕೆ ಈಡು ಮಾಡಿದೆ.ಇದೇ ವೇಳೆ ಮುಂದಿನ ಮೂರೂ ದಿನಗಳ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕರಾವಳಿಯ ಬೀಚ್ ಗಳಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇದ ಹೇರಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





