ವಿದ್ಯುತ್ ಸ್ಪರ್ಶಿಸಿ ಪವರ್ ಮೆನ್ ದುರ್ಮರಣ ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಕ್ಕಿಲಾಡಿ ನಡೆದಿದೆ. ದಾವಣಗೆರೆ ಮೂಲದ ಮಿಟ್ಯಾ ನಾಯಕ್(35), ಮೃತ ಪಟ್ಟ ವ್ಯಕ್ತಿಯಾಗಿದ್ದು, ವಿದ್ಯುತ್
ದುರಸ್ಥಿ ಮಾಡಿದ ಬಳಿಕ ವಿದ್ಯುತ್ ಪೂರೈಕೆ ಮಾಡುವ ವೇಳೆ ಘಟನೆ ಸಂಬವಿಸಿದೆ. ವಿದ್ಯುತ್ ಪರಿವರ್ತಕದಲ್ಲಿ ಚಾಲನೆ ಕೊಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದಿದೆ.
ಮೃತ ವ್ಯಕ್ತಿ ಉಪ್ಪಿನಂಗಡಿ ಮೆಸ್ಕಾಂ ಶಾಖೆಯಲ್ಲಿ ಪವರ್ ಮೆನ್ ಕೆಲಸ ನಿರ್ವಹಿಸುತ್ತಿದ್ದರು.
ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಲಾಗಿತ್ತು. ದುರಸ್ಥಿಯ
ಬಳಿಕ ಲೈನ್ ಚಾರ್ಜ್ ಮಾಡಲು ಹೋಗಿದ್ದರು. ಆ ವೇಳೆ ಅವಘಡ ಸಂಬವಿಸಿ ಸಾವನ್ನಾಪಿದ್ದಾರೆ. ಸ್ಥಳಕ್ಕೆ
ಹಿರಿಯ ಅಧಿಕಾರಿಗಳು ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





