Breaking News

ಉಳ್ಳಾಲದಲ್ಲಿ ಕಡಲ ಕೊರೆತ ಹಾವಳಿ

ರಾಜ್ಯದ ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರಿದಿದೆ . ಉಳ್ಳಾಲದಲ್ಲಿ ಕಡಲ ಕೊರೆತ ಹಾವಳಿ ತೀವ್ರ ಗೊಂಡಿದೆ .ಹಲವು ಮನೆಗಳಿಗೆ ಹಾನಿ ಆಗಿದೆ .ಇನ್ನೂ ಕೆಲವು ಮನೆಗಳು ಅಪಾಯದ ಅಂಚಿನಲ್ಲಿವೆ .ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಉಳ್ಳಾಲ ದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಯು ಟಿ ಖಾದರ್ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ಮಳೆಗಾಲದ ಆರಂಭದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ .ಹಲವಾರು ಮನೆಗಳಿಗೆ ಹಾನಿ ಆಗಿದೆ .ಇನ್ನೂ ಕೆಲವು ಮನೆಗಳು ಅಪಾಯದಲ್ಲಿವೆ .ಮನೆ ಕಳೆದುಕೊಂಡವರಿಗೆ ಸರಕಾರದ ವತಿಯಿಂದ ಪರಿಹಾರ ನೀಡಲಾಗುವುದು .ಕಡಲ ಕೊರೆತ ಸಮಸ್ಯೆ ಗೆ ಶಾಶ್ವತ ಪರಿಹಾರ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು . ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು .

Share News

About admin

Check Also

ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು …

Leave a Reply

Your email address will not be published. Required fields are marked *