ದಲಿತ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಬಿಎಸ್ ಪಿ ಕಾರ್ಯಕರ್ತರು ಚಾಮರಾಜನಗರ ದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ವ್ಯಾಪ್ತಿಗೆ ಬರುವ ಕಬ್ಬೇಕಟ್ಟೆ ಗ್ರಾಮದ ಪ್ರತಾಪ್ ಎಂಬ ಪರಿಶಿಷ್ಟ ಜಾತಿಯ ಯುವಕನಿಗೆ ಶನೇಶ್ವರ ದೇವಸ್ಥಾನ ಪ್ರವೇಶಿಸಿ ಧಾಂದಲೆ ನಡೆಸಿರುವ ಆರೋಪ ಮಾಡಿ, ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿರುವ ಕ್ರಮ ಸರಿಯಲ್ಲ ಎಂದು ಆರೋಪಿಸಿದರು. ದೇಶದಲ್ಲಿ ಪದೇ ಪದೇ ಇಂತಹ ಘಟನೆ ಮರುಕಳಿಸುತ್ತಿರುವುದು ನಾಚಿಕೆಯ ಸಂಗತಿಯಾಗಿದ್ದು ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ ಎಂದರು. ಕೂಡಲೇ ಈ ಅಮಾನವೀಯ ಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸ ಬೇಕು ಇಲ್ಲವೇ ಇವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಅವರು ಆಗ್ರಹಿಸಿದರು.———————————————————–
bigtvnews | Hubli Dharwad News | Kannada News | Karnataka News Hubli News | News In Hubli | Local news





