ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ವಿಡಿಯೊ ವೈರಲ್ ಮಾಡಿದ್ದ ಹಿನ್ನಲೆಯಲ್ಲಿ ಮರ್ಯಾದೆಗೆ ಅಂಜಿ ಪತಿ-ಪತ್ನಿ ಆತ್ಮಹತ್ಯೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೊಂಡಾಪುರದಲ್ಲಿ ನಡೆದಿದೆ. ಪತಿ ಮೈಲಾರಪ್ಪ ಸಾವನ್ನಪ್ಪಿದು, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟು ಪತಿ ಮೈಲಾರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಪತ್ನಿ ಸರೋಜಾ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮದ ವಿನಯ್ ಎಂಬುವನಿಂದ ಮೈಲಾರಪ್ಪ ಪತ್ನಿಗೆ ಕಿರುಕುಳ ನೀಡುತ್ತಿದ್ದ, ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಸರೋಜಾ ಅವರ ಬಗ್ಗೆ ಅಪ ಪ್ರಚಾರ ಮಾಡಿದ್ದ ವಿನಯ್ ಎಂದು ತಿಳಿದು ಬಂದಿದೆ. ಪ್ರಕರಣದ ಬಳಿಕ ಆರೋಪಿ ವಿನಯ್ ನಾಪತ್ತೆ ಯಾಗಿದ್ದಾನೆ. ಈ ಕುರಿತು ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





