Breaking News

ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಪ್ರತಿಭಟನೆ

ಶಿಥಿಲಗೊಂಡಿರುವ ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಕರ್ನಾಟಕ ಸೇನಾಪಡೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿತು.ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಚಾ.ರಂ.ಶ್ರೀನಿವಾಸಗೌಡ, ಇತಿಹಾಸ ಪ್ರಸಿದ್ದ ಚಾಮರಾಜೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸುಮಾರು ತಿಂಗಳುಗಳೇ ಕಳೆದರೂ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿಲ್ಲ ಎಂದು ಆರೋಪಿದರು. ಪ್ರತಿ ವರ್ಷ ಆಷಾಡ ಮಾಸದಲ್ಲಿ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ಆಚರಣೆ ನಡೆದು ಕೊಂಡು ಬಂದಿದೆ. ಈ ಜಾತ್ರೆಗೆ ಜಿಲ್ಲೆ ಹಾಗೂ ಬೇರೆ ಜಿಲ್ಲೆಗಳಿಂದಲೂ ನವ ದಂಪತಿಗಳು ಆಗಮಿಸುತ್ತಿದ್ದರು. ಇದರಿಂದ ಈ ಜಾತ್ರೆ ಪ್ರಸಿದ್ದಿ ಪಡೆದಿತ್ತು. ಕಳೆದ ಮೂರು ವರ್ಷಗಳಿಂದ ಚಾಮರಾಜೇಶ್ವರ ರಥೋತ್ಸವ ನಡೆಯದಿರುವುದು ಭಕ್ತಾಧಿಗಳಲ್ಲಿ ನಿರಾಸೆ ಉಂಟು ಮಾಡಿದೆ. ಹಾಗೇಯೇ ಚಾಮರಾಜೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿ ಕಳಪೆ ಗುಣ ಮಟ್ಟದಿಂದ ಕೂಡಿದ್ದು ಜಿಲ್ಲಾಧಿಕಾರಿಗಳು ಖುದ್ದು ಪರಿಶೀಲನೆ ನಡೆಸಬೇಕೆಂದು ಅವರು ಆಗ್ರಹಿಸಿದರು.———————————————————–

Share News

About admin

Check Also

ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!!

ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು …

Leave a Reply

Your email address will not be published. Required fields are marked *