ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಖಂಡಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋರ್ಟ್ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಖಂಡಿಸಿ ಹುಕ್ಕೇರಿ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಡಾ. ಅಂಬೇಡ್ಕರ ಜನ ಜಾಗೃತಿ ಸಂಘಟನೆಯಿಂದ ಪ್ರತಿಭಟನೆ ಮಾಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿಯಿಂದಾಗಿನಗರದಲ್ಲಿ ಒಂದು ಘಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





