ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿ ಇದು ಹಿಂದೆ ಬಿಜೆಪಿಯವರ ಕಾಲದಲ್ಲಿ ಆಗಿರೋದು. ಜೆಡಿಎಸ್ , ಕಾಂಗ್ರೆಸ್ ನವರು ಮಾಡಿರೋದಲ್ಲ. ಈ ಬಗ್ಗೆ ಪರಾಮರ್ಶೆಗೆ ಸಂಪುಟ ಉಪಸಮಿತಿ ರಚಿಸಲಾಗಿದೆ. ಉಪಸಮಿತಿಯಲ್ಲಿ ಎಲ್ಲರು ಹಿರಿಯರು ಇದ್ದಾರೆ. ಅವರೇ ಒಳ್ಳೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇನ್ನೂ ಜಿಂದಾಲ್ ವಿರುದ್ಧ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಅವರು ಪಾದಯಾತ್ರೆ ಮಾಡಲಿ. ಇದರಿಂದ ರೋಗವಾದ್ರು ದೂರವಾಗುತ್ತವೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಟೀಕೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





