ಮ್ಯಾಂಚೆಸ್ಟರ್: ಐಸಿಸಿ ವಿಶ್ವಕಪ್ 2019ರ 24ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಅಫಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಇಲ್ಲಿನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಎರಡೂ ತಂಡಗಳು ಸಕಲ ರೀತಿಯಲ್ಲಿ ಸಜ್ಜಾಗಿವೆ. ಬಲಿಷ್ಠ ಇಂಗ್ಲೆಂಡ್ಗೆ ಇಂಗ್ಲೆಂಡ್ ಅಂಕ ಪಟ್ಟಿಯಲ್ಲಿ 6 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ನಾಲ್ಕು ಪಂದ್ಯದಲ್ಲಿ ಮೂರರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲುಕಂಡಿದೆ.ಅಫಘಾನಿಸ್ತಾನ ತಂಡವು ಆಡಿದ ನಾಲ್ಕು ಪಂದ್ಯದಲ್ಲಿ ನಾಲ್ಕರಲ್ಲೂ ಸೋತಿದೆ. ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೂ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ ಪ್ರಬಲ ಪೈಪೋಟಿ ನೀಡುವ ಭರವಸೆಯೊಂದಿಗೆ ಮೈದಾನಕ್ಕೆ ಇಳಿಯಲು ಸಜ್ಜಾಗಿದೆ. ಇನ್ನೂ ಗೆಲುವಿನ ಖಾತೆ ತೆರೆಯದ ತಂಡ ಈ ಪಂದ್ಯದಲ್ಲಿ ಸೋತರೆ ಬಹುತೇಕ ವಿಶ್ವಕಪ್ನಿಂದ ಹೊರಬೀಳಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





