ಹುಬ್ಬಳ್ಳಿಯ ನೂತನ ನ್ಯಾಯಾಲಯದಲ್ಲಿ ಇಂದು ವಿಚಾರಣಾಧೀನ ಖೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರುಪಡಿಸುವ ಕಾರ್ಯಶುರುವಾಗಿದೆ. ಸಬ್ ಜೈಲಿನಲ್ಲಿರುವ ಸೆಷನ್ ಪ್ರಕರಣದ ವಿಚಾರಣಾಧೀನ ಖೈದಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಗಂಗಾಧರ ಅವರು ವಿಚಾರಣೆ ನಡೆಸಿದರು. ಖೈದಿಗಳನ್ನು ಭದ್ರತೆಯಲ್ಲಿ ನ್ಯಾಯಾಲಯಗಳಿಗೆ ಹಾಜರು ಪಡಿಸಬೇಕು. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಗಳು ಲಭ್ಯವಿಲ್ಲದಿದ್ದಾಗ ಅವರನ್ನು ಕೋರ್ಟ್ ಗೆ ಹಾಜರು ಪಡಿಸಲಾಗುದಿಲ್ಲ. ಇದರಿಂದಾಗಿ ವಿಚಾರಣೆ ತೊಂದರೆಯಾಗುತ್ತದೆ. ಕೆಲವೊಮ್ಮ ಸಾಕ್ಷೀಗಳನ್ನು ಸಹ ಹಾಜಪಡಿಸಲು ತೊಂದರೆಯಾದಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಬಹುದು. ಇದರಿಂದ ಕೋರ್ಟ್ ನ ಸಮಯ ಉಳಿತಾಯವಾಗಿ ಪ್ರಕರಣಗಳನ್ನು ಶೀಘ್ರವಾಗಿ ವಿಲೆವಾರಿ ಮಾಡಬಹುದು. ನೂತನ ನ್ಯಾಯಾಲಯವು ಎಲ್ಲಾ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ 18 ರಿಂದ 19 ವಿವಿಧ ಹಂತದ ನ್ಯಾಯಾಲಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಮಾನಗಳಲ್ಲಿ ಎಲ್ಲಾ ನ್ಯಾಯಾಲಗಳಿಗೂ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ವಿಸ್ತರಿಲಾಗುವುದು ಎಂದು ಹಿರಿಯ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎ.ಕೆ.ನಾಗರಾಜಪ್ಪ ಅವರು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





