ಚನ್ನಪಟ್ಟಣ ತಾಲ್ಲೂಕಿನ ಕಣ್ವ ಬಳಿ 5ಎಕರೆ ಪ್ರದೇಶವನ್ನು ಪ್ತವಾಸೋದ್ಯಮಕ್ಕೆ ಮೀಸಲಿಡಲಾಗಿದೆ ಎಂದು ಸಚಿವ ಸಾರಾ ಮಹೇಶ್ ಹೇಳಿಕೆ ನೀಡಿದರು.10 ಕೋಟಿ ಪ್ರಸ್ತಾವನೆಯಲ್ಲಿ 8 ಕೋಟಿ ಬಿಡುಗಡೆ ಮಾಡಲಾಗುವುದು . ಕಣ್ವಾ ಬಳಿ ಚಿಲ್ಡ್ರನ್ಸ್ ಪಾರ್ಕ್ ಗೆ 2 ಕೋಟಿ ಸಾಲುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದು. ರೇಷ್ಮೆಯನ್ನು ವಿದೇಶಗಳಿಂದ ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳುತ್ತಿದೆ. ರೇಷ್ಮೆ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರದ ಆಮದು ಕಾರಣ. ರೇಷ್ಮೆ ಬೆಲೆ ಹೆಚ್ಚಿಸಲು ರೇಷ್ಮೆಯ ಹದಿನೈದು ಉಪ ಉತ್ಪನ್ನಗಳ ತಯಾರಿಗೆ ಸಿದ್ದಂತೆ ನಡೆಸಲಾಗುತ್ತಿದೆ. ಮುಂದಿನ ವಾರದಲ್ಲಿ ಈ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಹಾಗೂ ಚನ್ನಪಟ್ಟಣದ ಕೆಎಸ್ ಐಸಿ ಹಳೆ ಕಟ್ಟಡಗಳ ನವೀಕರಣ ಜೊತೆಗೆ ಒಂದು ಲಕ್ಷ ಸೀರೆ ತಯಾರಿಕೆಗೆ ಆದ್ಯತೆ ನೀಡಲಾಗುವುದು. ಮೈಸೂರಿನಲ್ಲಿಯು ಹೊಸ ಕಟ್ಟಡಗಳನ್ನು ಸಿದ್ದ ಪಡಿಸಲಾಗುವುದು. ಇದಕ್ಕಾಗಿ 100 ಕೋಟಿ ಮೀಸಲಿಡಲಾಗುವುದು. ರೇಷ್ಮೆ ಆಯೋಗದ ಕಾರ್ಯದರ್ಶಿಯೊಂದಿಗೆ ಸಂಜೆ ಸಭೆ ನಡೆಸಲಾಗುತ್ತಿದ್ದು, ರೇಷ್ಮೆ ದರ ಸಂಬಂಧ ಚರ್ಚೆ ಮಾಡಲಾಗುವುದು. ಅನ್ ಲೈನ್ ಮೂಲಕ ರೈತರಿಗೆ ಪೇಮೆಂಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಸಂಜೆಯೊಳಗೆ ಪೆಮೇಂಟ್ ಗೆ ತೊಡಕಾಗಿದೆ. ರೇಷ್ಮೆ ಹರಾಜು ಮುನ್ನ ಅಕೌಂಟ್ ಗಳಲ್ಲಿಹಣ ಇಡುವ ವ್ಯವಸ್ಥೆ ಮಾಡಲಾಗುವುದು. ರೇಷ್ಮೆ ಮಾರುಕಟ್ಟೆಯನ್ನು ಅಧುನೀಕರಣ ಮಾಡಲಾಗುವುದು ಎಂದು ಸಾರಾ ಮಹೇಶ್ ಹೇಳಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





