ಸಂಸತ್ತಿನಲ್ಲಿ ಇಂಗ್ಲಿಷ್ ಪ್ರಮಾಣ ವಚನ ಸ್ವೀಕಾರ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರತಿಕೃತಿ ದಹಿಸಿ ಅಂಗಡಿ ವಿರುದ್ಧ ಘೋಷಣೆ ಕೂಗಿದರು. ಅಂಗಡಿ ಮನೆ ಮುಂದೆ ಧರಣಿಗೆ ಮುಂದಾದ ಕರವೇ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿ ತಡೆದರು ಇದರಿಂದಾಗಿ ಪೊಲೀಸರು ಮತ್ತು ಕರವೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಚುನಾವಣೆಯಲ್ಲಿ ಕನ್ನಡದ ಓಟು ಬೇಕು ಆದ್ರ ಕನ್ನಡ ಬೇಡ್ವಾ ಎಂದು ಕನ್ನಡ ವಿರೋಧಿ ಧೋರಣೆ ಅನುಸರಿಸುವ ಸುರೇಶ ಅಂಗಡಿ ವಿರುದ್ಧ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಪರಿಸ್ಥಿತಿ ಹತೋಟಿ ಕೈ ಮೀರುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





