Breaking News

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು. ನಗರದ ಜಯದೇವ ವೃತ್ತದ ಮುಖಾಂತರ ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ,ಶಿಕ್ಷಣವೆಂಬುದು ಸರ್ವರಿಗೂ ಸಿಗಬೇಕಾಗಿರು ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಪರಿಕಲ್ಪನೆ ನಮ್ಮದು ,‌ಆದರೆ 2018-19 ನೇ ಸಾಲಿನ ಬಜೆಟ್‌ ನಲ್ಲಿ ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯವಾಗಿದೆ, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯ ಉಪವಿಭಾಗಾಧಿಕಾರಿಗಳಗೆ ಮನವಿ ಸಲ್ಲಿಸಿದರು.

Share News

About admin

Check Also

ದಾವಣಗೆರೆ : ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿ.

ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು …

Leave a Reply

Your email address will not be published. Required fields are marked *