ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲು ನಾನೇನು ಯುವಕನೇ? ಎಂದು ಚಾಮರಾಜನಗರದಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೆ ನೀಡಿದರು. ಪ್ರತಿಯೊಬ್ಬರಿಗೂ ಒಂದು ಕಾಲವಿರ್ತದೆ. ಅದರ ಆಧಾರದ ಮೇಲೆ ಕೆಲಸ ಮಾಡ್ತಾರೆ. ಯಾವಾಗಲೂ ಕಂಪ್ಲೇಂಟ್ ಮಾಡೋ ದೃಷ್ಟಿಯಲ್ಲಿ ಇರಬಾರದು. ಅಡ್ಜಸ್ಟ್ ಮಾಡ್ಕೊಂಡು ಹೋಗ್ಬೇಕು. ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡೋರು ಯಾರು? ಅವರು ಸೇಫ್ ಲೀಡರ್. ಅವ್ರು ನಮ್ಮ ನಾಯಕರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ. ಮೇಜರ್ ಸರ್ಜರಿ ನಡೆಯುವ ಪ್ರಶ್ನೆಯೇ ಇಲ್ಲ. ಈ ವಿಚಾರವಾಗಿ ನಂಗೇನೂ ಗೊತ್ತಿಲ್ಲ. ನಾನದರ ಬಗ್ಗೆ ತಲೆಯನ್ನೂ ಕೆಡಿಸಿಕೊಂಡಿಲ್ಲ ಎಂದು ಚಾಮರಾಜನಗರದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





