ಧಾರಾಕಾರ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರ ಗ್ರಾಮದಲ್ಲಿ ನಡೆದಿದೆ. ಕಿತ್ತೂರ ಗ್ರಾಮದ ರೇಣವ್ವ ಚಿಂತಾಲ 50 ಮೃತ ಮಹಿಳೆ. ಸವದತ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದ ಕಿತ್ತೂರ ಗ್ರಾಮದ ಹಳ್ಳದಲ್ಲಿ ರಭಸದಿಂದ ನೀರು ಹರಿದಿದೆ.ಕಟ್ಟಿಗೆ ಆರಿಸಲು ಹೋದಾಗ ರೇಣವ್ವ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಸ್ಥಳಿಯ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





