Breaking News

ಕೋಲಾರದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ.

KOLAR:-ಕೋಲಾರದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ನಡೆಯುತ್ತಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಯೋಗ ದಿನ ಆಯೋಜಿಸಿದೆ. ಜಿಲ್ಲಾಡಳಿತದೊಂದಿಗೆ ಹಲವು ಸಂಘ ಸಂಸ್ಥೆಗಳು ಸಹಯೋಗದೊಂದಿಗೆ ದೀಪ ಬೆಳಗಿಸುವ ಮೂಲಕ ಜಿಲ್ಲಾದಿಕಾರಿ ಮಂಜುನಾಥ್ ಯೋಗ ದಿನಕ್ಕೆ ಚಾಲನೆ ನೀಡಿದರು. ಯೋಗ ದಿನಾಚರಣೆಯಲ್ಲಿ ನೂರಾರು ವಿದ್ಯಾರ್ಥಿಗಳು, ಯೋಗಪಟುಗಳು ಭಾಗಿಯಾಗಿದ್ದರು. ಸಾಮೂಹಿಕ ಯೋಗ ಪ್ರದರ್ಶನವನ್ನು ಯೋಗಪಟುಗಳು ನಡೆಸಿದರು. ಡಿಸಿ ಮಂಜುನಾಥ್, ಸಿಇಓ ಜಗದೀಶ್, ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Share News

About admin

Check Also

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು …

Leave a Reply

Your email address will not be published. Required fields are marked *