ರಾಯಚೂರು:. ಸಾಲಬಾಧೆ ತಾಳಲಾರದೆ ರೈತ ಸಾವಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನರಕಲದಿನ್ನಿ ಗ್ರಾಮದಲ್ಲಿ ನಡೆದಿದೆ.ಬಸವರಾಜ ಜಾವೂರ (35) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ನಾಗರಗಾಳ ಪಿಕೆಜಿಬಿ ಬ್ಯಾಂಕ್ನಲ್ಲಿ ಸುಮಾರು 3 ಲಕ್ಷ ರೂ. ಸಾಲ ಮಾಡಿದ್ದ ಎಂದು ತಿಳಿದುಬಂದಿದೆ. ರೈತ ಸತತ ಬರಗಾಲದಿಂದ ತತ್ತರಿಸಿ ಹೋಗಿದ್ದು, ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.ಈ ಸಂಬಂಧ ಲಿಂಗಸೂಗೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





