ಕಂದಾಯ ಇಲಾಖೆಯಲ್ಲಿ ಇತ್ಯರ್ಥವಾಗದೇ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಜೂನ್ 24 ರಿಂದ ಜೂನ್ 30 ರವರೆಗೆ ” ಕಡತ ವಿಲೇವಾರಿ ಸಪ್ತಾಹ ” ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಸಪ್ತಾಹದ ಅವಧಿಯಲ್ಲಿ ಸಾಮಾನ್ಯ ಕಡತಗಳ ಜೊತೆಗೆ ವಿಶೇಷವಾಗಿ ದೀರ್ಘ ಕಾಲದಿಂದ ಬಾಕಿ ಉಳಿದ ಕಡತಗಳನ್ನು ವಿಲೇವಾರಿ ಮಾಡಲಾಗುವುದು.ಕಡತಗಳ ಶೀಘ್ರ ವಿಲೇವಾರಿಯಲ್ಲಿ ಪಾರದರ್ಶಕತೆ ನಿಯಮ ಕಾಯ್ದುಕೊಳ್ಳುವ ಕುರಿತು ಇಲಾಖಾ ಮುಖ್ಯಸ್ಥರು,ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾರ್ಗದರ್ಶನ ಮಾಡಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಕಳೆದ 2018 ರ ನವೆಂಬರ್ 12 ರಿಂದ 18 ರವರೆಗೆ ಕಡತ ವಿಲೇವಾರಿ ಸಪ್ತಾಹ ಹಮ್ಮಿಕೊಂಡ ಸಂದರ್ಭದಲ್ಲಿ ರಾಜ್ಯದಾದ್ಯಂತ ಸುಮಾರು 2.5 ಲಕ್ಷಕ್ಕೂ ಅಧಿಕ ಕಡತಗಳು ವಿಲೇವಾರಿಯಾದವು, ಇದರಿಂದ ಪ್ರೇರಣೆ ದೊರೆತಿದ್ದು ಇದೀಗ ಜೂನ್ 24 ರಿಂದ 30 ರವರೆಗೆ ಮತ್ತೊಮ್ಮೆ ಸಪ್ತಾಹ ಏರ್ಪಡಿಸಲಾಗಿದೆ. ಸಪ್ತಾಹದ ಕೊನೆಯ ದಿನವಾಗಿರುವ ಜೂನ್ 30 ರ ನಂತರ ಎಲ್ಲಾ ಎಲ್ಲಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಪ್ತಾಹದ ಆರಂಭದಲ್ಲಿ ಬಾಕಿ ಇದ್ದ ಕಡತಗಳು, ಸಪ್ತಾಹದ ಅವಧಿಯಲ್ಲಿ ವಿಲೇವಾರಿ ಮಾಡಿದ ನಂತರ ಬಾಕಿ ಉಳಿದ ಕಡತಗಳ ವಿವರಗಳನ್ನು ಕ್ರೋಢೀಕರಿಸಿ ಜುಲೈ 2 ರವರೆಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಚಿವರು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





