Breaking News

ಬಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ

ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯ ಅಗಸರಹಳ್ಳಿ ಗೇಟ್ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಮತ್ತು ಟಾಟಾ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವಿಗೆ ಶರಣಾಗಿದ್ದಾನೆ. ಎರಡೂ ವಾಹನಗಳ ಮುಂಭಾಗವು ನಜ್ಜುಗುಜ್ಜಾಗಿದೆ. ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಗಾಯಾಳುಗಳನ್ನು ಹೊರತೆಗೆದು ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಕಾರ್ಯವು ಭರದಿಂದ ಸಾಗಿದೆ. ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಮತ್ತು ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ ಹಾಗೂ ಸಿಬ್ಬಂಧಿಗಳು ಸ್ಥಳಕ್ಕೆ ಧಾವಿಸಿದ್ದು ಪಟ್ಟಣ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ಸ್ಥಳಕ್ಕೆ 108 ತುರ್ತು ಚಿಕಿತ್ಸಾ ವಾಹನವನ್ನು ಕರೆಸಿ ಗಾಯಾಳುಗಳ ರಕ್ಷಣೆ ಹಾಗೂ ಚಹ ಚಿಕಿತ್ಸೆಗೆ ಮುಂದಾಗಿದ್ದಾರೆ…

Share News

About admin

Check Also

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ …

Leave a Reply

Your email address will not be published. Required fields are marked *