ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಚಾಮರಾಜನಗರದಲ್ಲಿ ಆಯೋಜಿಸಲಾಗಿದೆ. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಕೆಂಪೇಗೌಡ ರಥಕ್ಕೆ ಸಮುದಾಯದ ಮುಖಂಡರು ಚಾಲನೆ ನೀಡಿದರು. ವಿವಿಧ ಕಲಾ ತಂಡಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಸಮುದಾಯದ ಮುಖಂಡರು ಮೆರವಣಿಗೆಯಲ್ಲಿ ಭಾಗಿಯಾಗಿ, ಕೆಂಪೇಗೌಡರಿಗೆ ಜಯಘೋಷಣೆಗಳನ್ನ ಕೂಗಿ ಹರ್ಷ ವ್ಯಕ್ತಪಡಿಸಿದರು. ಬಳಿಕ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ ಪುಟ್ಟರಂಗಶೆಟ್ಟಿ ದೀಪಬೆಳಗಿಸಿ ನಾಡಪ್ರಭು ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಬಿ ಬಿ ಕಾವೇರಿ, ಸಿ ಇ ಓ ಲತಾಕುಮಾರಿ, ಎ ಎಸ್ಪಿ ಅನಿತಾ ಮುದ್ದಣ್ಣವರ್ ಹಾಗೂ ಇನ್ನಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





