ಮಂಡ್ಯ ಪಟ್ಟಣದ ಕೆ.ಆರ್. ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯವಿಮಾ ಕಾರ್ಡುಗಳನ್ನು ಶಾಸಕ ನಾರಾಯಣಗೌಡ ಫಲಾನುಭವಿಗಳಿಗೆ ವಿತರಿಸಿದರು. ಬಡವರು ಮತ್ತು ಮಧ್ಯಮ ವರ್ಗದ ಜನರು ಆರೋಗ್ಯವನ್ನು ಕಾಪಾಡಿಕೊಳ್ಳಲು ವರದಾನವಾಗಿರುವ ಆಯುಷ್ಮಾನ್ ಭಾರತ ಯೋಜನೆಯ ಉಪಯೋಗವನ್ನು ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ನಾರಾಯಣಗೌಡ ಮನವಿ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಗನ್ನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಹರೀಶ್, ತಾಲೂಕು ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಸ್ವಾಮಿನಾಯಕ, ಉಪಾಧ್ಯಕ್ಷ ರವಿ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕೀರಾಂ, ಪುರಸಭೆ ಸದಸ್ಯರಾದ ಕೆ.ಎಸ್.ಸಂತೋಷಕುಮಾರ್, ಗಿರೀಶ್, ಶಾಮಿಯಾನ ತಿಮ್ಮೇಗೌಡ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





