ಆನೇಕಲ್: ಚಲಿಸುತ್ತಿದ್ದ ಕಾರಿನ ಎಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಭಸ್ಮವಾಗಿರುವ ಘಟನೆ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ನಡೆದಿದೆ.ಹುಂಡೈ ಕಂಪನಿಯ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಸಂಪೂರ್ಣ ಕಾರು ಹೊತ್ತಿ ಉರಿದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಇಬ್ಬರು ಇಳಿದು ಅಪಾಯದಿಂದ ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಆಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ನಿರತರಾದರು.ಹೊತ್ತಿ ಉರಿಯುತ್ತಿದ್ದ ಕಾರನ್ನು ನೋಡಲು ಜನ ಸೇರಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಯಿತು.ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





