ಧಾರವಾಡ: ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಂಟು ಜನರು ಗಂಭೀರ ಗಾಯ, ಇಬ್ಬರ ಸ್ಥಿತಿ ಚಿಂತಾಜನಕಗೊಂಡ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ಬಳಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಬೆಳಗಾವಿಗೆ ಹೊರಟ್ಟಿದ್ದ ಲಾರಿಗೆ ಗೋಕಾಕ್ ದಿಂದ ಹುಬ್ಬಳ್ಳಿ ಮಾರ್ಗದ ಮೂಲಕ ಹಾನಗಲ್ ಗೆ ಹೊರಟ್ಟಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಎಂಟು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ. ಇನ್ನೂ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





