Breaking News

ಕೊನೆಗೂ ಯಶಸ್ವಿಯಾಗಿ ಚಿರತೆ ಬೋನಿಗೆ ಸೇರಿಸಿದ ಅರಣ್ಯ ಇಲಾಖೆ

ಚಿಕ್ಕಬಳ್ಳಾಪುರ: ಬೆ ಳಂಬೆಳಗೆ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ಷೇತ್ರದಲ್ಲಿ ನಡೆದಿದೆ.ಜಿಲ್ಲೆಯ ಪ್ರಮುಖ ಯಾತ್ರ ಸ್ಥಳವಾದ ಕೈವಾರ ಬೆಟ್ಟದ ಮೇಲೆ ಕಳೆದ ಎರಡು ತಿಂಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿದ್ದು ಪ್ರವಾಸಿಗರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದರು. ಇನ್ನೂ ಚಿರತೆಯನ್ನು ಸೆರೆಹಿಡಿಯುವುದರಲ್ಲಿ ಅರಣ್ಯ ಇಲಾಖೆಯೂ ಸಹ ಸಾಕಷ್ಟು ಶ್ರಮವಹಿಸಿದ್ದು ಚಿರತೆ ಮಾತ್ರ ಕಣ್ಣಾಮುಚ್ಚಾಲೇ ಆಟವಾಡಿ ತಪ್ಪಿಸಿಕೊಳ್ಳುತ್ತಿತ್ತು. ಇದುವರೆಗೂ ಎರಡು ಬಾರೀ ಪ್ರತ್ಯಕ್ಷವಾದ ಚಿರತೆ ಪ್ರವಾಸಿಗರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯಮೂಡಿಸಿದ್ದು ಬೆಟ್ಟದ ಪಕ್ಕದ ಅರಣ್ಯದಲ್ಲಿ ಕಾಡು ಹಂದಿಗಳನ್ನು ಭೇಟಿಯಾಡುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನೂ ಯಾವುದೇ ಸಾಕು ಪ್ರಾಣಿ ಸೇರಿದಂತೆ ರೈತರಿಗೂ ತೊಂದರೆ ಕೊಟ್ಟಿಲ್ಲಾ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಇನ್ನೂ ಜಿಲ್ಲೆಯ ಉಪಾರಣ್ಯನಿರೀಕ್ಷಕರ ಮಾರ್ಗದರ್ಶನದಂತೆ ಚಿಂತಾಮಣಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನಲ್ಲೇ ಬೋನು ಏರ್ಪಡಿಸಿ ಕುರಿಯನ್ನು ಬಲೆಗಾಗಿ ಬೀಸಲಾಗಿದ್ದು ಚಿರತೆಯನ್ನು ಸೆರೆಹಿಡಿಯಲು ಯಶಸ್ವಿಯಾಗಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *