Breaking News

ಹುಬ್ಬಳ್ಳಿಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಜಿಟಿ ಜಿಟಿ ಮಳೆ ಸುರಿಯುತಿದ್ದು, ಒಂದು ಕಡೆ ಮಳೆ ಇಲ್ಲದೇ ಕಂಗಾಲಾಗಿದ್ದ ರೈತರು ಸಂತಸಪಟ್ಟರೆ, ಇನ್ನೊಂದು ಕಡೆ ಮಳೆಯಿಂದ ಮನೆಗಳು ನೆಲಸಮವಾಗಿರುವದರಿಂದ ಜನರು ಆತಂಕ ಪಡುವ ವಾತಾವರಣ ನಿರ್ಮಾಣವಾಗಿದೆ.‌ಶನಿವಾರದಿಂದ ಪ್ರಾರಂಭವಾಗಿರುವ ಜಿಟಿ ಜಿಟಿ ಮಳೆಯಿಂದ ಜನ ಪರದಾಡುವಂತಾಗಿದ್ದು, ಜನರು ಮನೆಯಿಂದ ಹೊರಬೀಳಲು ಹಿಂದೇಟು ಹಾಕುತ್ತಿದ್ದಾರೆ. ಶನಿವಾರ ರಾತ್ರಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ನಗರದ ಬಂಕಾಪುರ ಚೌಕದ ನಿವಾಸಿ ಮಲ್ಲಿಕಾರ್ಜುನ ಮೋಟಗಿ ಎಂಬುವರ ಮನೆಯ ತಡೆ ಗೋಡೆ ಕುಸಿದು ಬಿದ್ದಿದ್ದು, ಇದರ ಜೊತೆಗೆ ನಗರದ ಹಲವೆಡೆ ಮನೆಗಳು ನೆಲಕ್ಕುರುಳಿವೆ. ಒಟ್ಟಿನಲ್ಲಿ ಜಿಟಿ ಜಿಟಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

Share News

About admin

Check Also

ನಗರ ಪೊಲೀಸ್ ವಿರುದ್ಧ ಅರ್ಭಟಿಸಿದ ರೌಡಿಶೀಟರ್ ಗಳ ವಿರುದ್ಧ ಕ್ರಮ ಒತ್ತಾಯ!!

ಮನೆಮುರಕರ ಕೂಟದಿಂದ ಸಿಪಿಐ ಹಾಗು ಪೊಲೀಸ್ ಇಲಾಖೆಗೆ ಕಳಂಕ ತರಲು ನಡಿತಾ ಸಂಚು? ಕೋರ್ಟ್ ನಲ್ಲಿ ಕೇಸ್ ಇದ್ದರು ಮಾಧ್ಯಮಗಳ …

Leave a Reply

Your email address will not be published. Required fields are marked *